ನವದೆಹಲಿ, ಎ.17 (DaijiworldNews/PY): "ಫೋಟೋ ಇರುವ ಬೋರ್ಡಿಂಗ್ ಪಾಸ್ ಧರಿಸಿದ, ತುರ್ತು ಸಂದರ್ಭದಲ್ಲಿ ಎಜೆಕ್ಟ್ ಬಟನ್ ಒತ್ತುವ ಪೈಲಟ್ನ ರೀತಿ ಪ್ರಧಾನಿ ನರೇಂದ್ರ ಮೋದಿ ಕಾಣಿಸುತ್ತಿದ್ದಾರೆ" ಎಂದು ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೊರೊನಾವನ್ನು ನಿಯಂತ್ರಿಸಲು ಪ್ರಧಾನಿ ಮೋದಿ ವಿಫಲರಾಗುತ್ತಿದ್ದಾರೆ. ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾ ಲಸಿಕೆ ರಫ್ತು ಮಾಡುತ್ತಿದ್ದ ದೇಶ ಇದೀಗ ಆಮದು ಮಾಡಿಕೊಳ್ಳುತ್ತಿದೆ" ಎಂದಿದ್ದಾರೆ.
"ಉತ್ತರಪ್ರದೇಶದಲ್ಲಿ ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಆರ್ಟಿಸಿಪಿಆರ್ ಪರೀಕ್ಷೆಯನ್ನು ತ್ವರಿತಗತಿಯಲ್ಲಿ ಮಾಡಬೇಕು" ಎಂದು ಹೇಳಿದ್ದಾರೆ.