ನವದೆಹಲಿ, ಎ.17 (DaijiworldNews/PY): ಗಣರಾಜ್ಯೋತ್ಸವ ದಿನದಂದು ಕೆಂಪು ಕೋಟೆ ಧ್ವಜ ಹಾರಿಸಿ ಧಾಂದಲೆ ಮಾಡಿದ್ದ ಪ್ರಕರಣದ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಜಾಮೀನುದಿಂದ ಜಾಮೀನು ಪಡೆದ ಕೆಲವೇ ಗಂಟೆಗಳ ಬಳಿಕ ಪುನಃ ನಟ ಹಾಗೂ ಸಾಮಾಜಿಕ ಹೋರಾಟಗಾರ ದೀಪ್ ಸಿಧು ಅವರನ್ನು ದೆಹಲಿ ಪೊಲೀಸ್ ಅಪರಾಧ ದಳ ಶನಿವಾರ ಬಂಧಿಸಿದೆ.
ಕೆಂಪು ಕೋಟೆ ಧ್ವಜ ಯಲ್ಲಿ ನಡೆದ ಹಿಂಸಚಾರಕ್ಕೆ ಸಂಬಂಧಿಸಿದಂತೆ ಆರ್ಕಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾ ದಾಖಲಿಸಿದ್ದ ಎಫ್ಐಆರ್ಗೆ ಸಂಬಂಧಿಸಿದಂತೆ ದೀಪ್ ಸಿಧು ಅವರನ್ನು ಬಂಧಿಸಲಾಗಿದೆ.
ಪ್ರತಿಭಟನೆಯ ಸಂದರ್ಭಪಾರಂಪರಿಕ ಕಟ್ಟಡದ ಕೆಲ ಭಾಗಗಳಿಗೆ ಹಾನಿಯಾಗಿದೆ ಎಂದು ಎಫ್ಐಆರ್ ದಾಖಲಿಸಿದೆ.
ಈ ಹಿಂದೆ ಸಿಧು ಅವರನ್ನು ಫೆಬ್ರವರಿ 9ರಂದು ಹರಿಯಾಣದ ಕರ್ನಾಲ್ನಲ್ಲಿ ಬಂಧಿಸಲಾಗಿತ್ತು. ಕೆಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ದ ತಾವು ನಡೆಸುತ್ತಿರುವ ಪ್ರತಿಭಟನೆಯನ್ನು ತಪ್ಪಿಸಲು ಸಿಧು ಯತ್ನಿಸಿದ್ದಾರೆ ಎಂದು ರೈತರು ಆರೋಪಿಸಿದ್ದರು.
ವಿವಾದಾತ್ಮಕ ಮೂರು ಕೃಷಿ ಕಾನೂನುಗಳ ರದ್ಧತಿಗೆ ಒತ್ತಾಯಿಸಿ ಜನವರಿ 26 ರಂದು ರೈತರು ಟ್ರ್ಯಾಕ್ಟರ್ ಮೆರವಣಿಗೆ ನಡೆಸುತ್ತಿದ್ದ ವೇಳೆಯಲ್ಲಿ ಪೊಲೀಸರು ಹಾಗೂ ಪ್ರತಿಭಟನಾ ನಿರತ ಸಹಸ್ರಾರು ರೈತರ ನಡುವೆ ಸಂಘರ್ಷ ಭುಗಿಲೆದ್ದಿತ್ತು.
ಅನೇಕ ಉದ್ರಿಕ್ತರು ಕೆಂಪುಕೋಟೆಯವರೆಗೂ ಟ್ರ್ಯಾಕ್ಟರ್ ಚಾಲನೆ ಮಾಡಿ, ಧರ್ಮವೊಂದರ ಬಾವುಟವನ್ನು ಆರೋಹಣ ಮಾಡಿದ್ದರು. ಈ ವೇಳೆ ಪ್ರತಿಭಟನಾಕಾರನೊಬ್ಬ ಮೃತಪಟ್ಟು, ಸುಮಾರು 500 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಕೆಂಪು ಕೋಟೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದರು.