ನವದೆಹಲಿ, ಏ.18 (DaijiworldNews/MB) : ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಅವರಿಗೂ ಕೊರೊನಾ ಪಾಸಿಟಿವ್ ಆಗಿದ್ದು ಸದ್ಯ ಅವರು ಹೋಂ ಕ್ವಾರಂಟೈನ್ಗೆ ಒಳಗಾಗಿದ್ದಾರೆ.
ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ತಿಳಿಸಿದ್ದಾರೆ. ''ಪುನರಾವರ್ತಿತ ಕೊರೊನಾ ಪರೀಕ್ಷೆ ನಡೆಸಿದ ಬಳಿಕ ಇಂದು ನನ್ನ ವರದಿ ಪಾಸಿಟಿವ್ ಆಗಿದೆ. ನಾನು ವೈದ್ಯರ ಸಲಹೆಯನ್ನು ತೆಗೆದುಕೊಳ್ಳುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಗಮನಹರಿಸಬೇಕು, ಸ್ವಯಂ ಕ್ವಾರಂಟೈನ್ಗೆ ಒಳಗಾಗಿ, ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಾನು ವಿನಂತಿಸುತ್ತೇನೆ. ನಾನು ದೈಹಿಕವಾಗಿ ಸದೃಢ ಹಾಗೂ ಉತ್ತಮವಾಗಿದ್ದೇನೆ'' ಎಂದು ತಿಳಿಸಿದ್ದಾರೆ.
ಶುಕ್ರವಾರ ಕಿರಣ್ ರಿಜಿಜು ಅವರು ಉತ್ತರಾಖಂಡದ ತೆಹ್ರಿಯಲ್ಲಿ ಜಲ ಮತ್ತು ಸಾಹಸ ಕ್ರೀಡಾ ಸಂಸ್ಥೆಯೊಂದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ಇತ್ತೀಚೆಗೆ ಕೊರೊನಾ ಸೋಂಕಿನಿಂದ ಗುಣಮುಖರಾದ ಉತ್ತರಾಖಂಡ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.