ನವದೆಹಲಿ, ಏ. 18 (DaijiworldNews/HR): ಏಪ್ರಿಲ್ 27, 28 ಮತ್ತು 30ರಂದು ನಡೆಯ ಬೇಕಿದ ಜೆಇಇ ಮುಖ್ಯ ಪರೀಕ್ಷೆಯನ್ನು ಕೇಂದ್ರ ಸರ್ಕಾರ ಮುಂದೂಡಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಕೇಂದ್ರ ಸಚಿವ ಡಾ.ರಮೇಶ್ ಪೊಕ್ರಿಯಾಳ್, "ದೇಶಾದ್ಯಂತ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ, ಜೆಇಇ ಮುಖ್ಯ ಪರೀಕ್ಷೆ 2021 ಅನ್ನು ಮುಂದೂಡಿಕೆ ಮಾಡಲಾಗುತ್ತಿದೆ" ಎಂದು ತಿಳಿಸಿದ್ದಾರೆ.
ಇನ್ನು "ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕ್ರಮ ಕೈಗೊಂಡಿದ್ದು, ಮುಂದೂಡಿಕೆ ಮಾಡಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ" ಎಂದು ಹೇಳಿದ್ದಾರೆ.