ನವದೆಹಲಿ, ಎ.18 (DaijiworldNews/PY)": ದೇಶದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ" ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಕೊರೊನಾ ಚೇತರಿಕೆಗಿಂತ ವೇಗವಾಗಿ ಸೋಂಕು ಹರಡುತ್ತಿದೆ. ಮೋದಿಜೀ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ. ಚುನಾವಣಾ ಆಯೋಗವು ಚುನಾವನಾ ರ್ಯಾಲಿಗಳನ್ನು ನಿಷೇಧಿಸಬೇಕು ಎಂದು ಘೋಷಣೆ ಮಾಡಲಿ. ನ್ಯಾಯಾಲಯಗಳು ಜನರ ಪ್ರಾಣವನ್ನು ರಕ್ಷಿಸಬೇಕು" ಎಂದು ಮನವಿ ಮಾಡಿದ್ದಾರೆ.
"ದೇಶದಲ್ಲಿ ಒಂದೇ ದಿನ 2,61,500 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಒಟ್ಟು ಪ್ರರಣಗಳ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ರವಿವಾರ ತಿಳಿಸಿದೆ.