ಶಹ್ಡೊಲ್, ಏ. 18 (DaijiworldNews/HR): ಮಧ್ಯಪ್ರದೇಶದ ಶಹ್ದೋಲ್ನಲ್ಲಿ ಆಕ್ಸಿಜನ್ ಪೂರೈಕೆಯಲ್ಲಿ ಕೊರತೆಯಿಂದಾಗಿ ಆರು ಜನ ಕೊರೊನಾ ಸೋಂಕಿತರು ಮೃತಪಟ್ಟ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ದುರ್ಘಟನೆ ನಡೆದಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ರೋಗಿಗಳಿಗೆ ಆಕ್ಸಿಜನ್ ಪೂರೈಕೆಯಲ್ಲಿ ವ್ಯತ್ಯಯವುಂಟಾಗಿ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ಡೀನ್ ಮಿಲಿಂದ್ ಶಿರಾಲ್ಕರ್ ತಿಳಿಸಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ಈ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದ್ದು, ಶನಿವಾರ ಸಾಯಂಕಾಲ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತ್ತು. ಕೂಡಲೇ ಆಕ್ಸಿಜನ್ ಪೂರೈಕೆದಾರರನ್ನು ಸಂಪರ್ಕಿಸಲಾಗುತ್ತಿದ್ದರಾದರೂ ರವಿವಾರ ತಡರಾತ್ರಿಯಾದರೂ ಆಕ್ಸಿಜನ್ ಹೊತ್ತ ವಾಹನ ಬಂದಿರಲಿಲ್ಲ. ಹೀಗಾಗಿ ಆರು ಜನ ಸಾವನ್ನಪ್ಪಿದ್ದಾರೆ ಎಂದು ಶಿರಾಲ್ಕರ್ ಹೇಳಿದ್ದಾರೆ.
ಈ ಆಸ್ಪತ್ರೆಯಲ್ಲಿ ಕೊರೊನಾ ಕೇಂದ್ರದ ತೀವ್ರ ನಿಗಾ ಘಟಕದಲ್ಲಿ 62 ಮಂದಿ ರೋಗಿಗಳು ದಾಖಲಾಗಿದ್ದರು.