ಬೆಂಗಳೂರು, ಎ.18 (DaijiworldNews/PY): "ರಾಜ್ಯ ರಾಜಧಾನಿಯಲ್ಲಿ ಹೆಚ್ಚುತ್ತಿರುಚ ಕೊರೊನಾ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿ ಮಾಡಲಾಗುವುದು. ಆದರೆ, ಯಾವುದೇ ಕಾರಣಕ್ಕೆ ಲಾಕ್ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ" ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸಚಿವರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಮಾತ್ರವೇ ಮಾರ್ಗವಲ್ಲ. ಬದಲಾಗಿ ಪರ್ಯಾಯ ಮಾರ್ಗದ ಮೂಲಕ ಕೊರೊನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಕಠಿಣ ನಿಯಮಗಳನ್ನು ಜಾರಿಗೆ ತರುವ ಅವಶ್ಯಕತೆ ಇದೆ. ಬಡವರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
"ಎಪ್ರಿಲ್ 19ರಂದು ಸರ್ವಪಕ್ಷ ಸಭೆ ನಡೆಯಲಿದೆ. ಅದಕ್ಕೆ ಪೂರಕವಾಗಿ ಇಂದು ಸಚಿವರ ಸಭೆ ನಡೆಯಿತು. ಅಭೆಯಲ್ಲಿ ವ್ಯಕ್ತವಾದ ಅಭಿಪ್ರಾಯವನ್ನು ಸಿಎಮ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿಸುತ್ತೇವೆ. ನಾಳೆ ನಡೆಯಲಿರುವ ಸರ್ವ ಪಕ್ಷ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು" ಎಂದು ತಿಳಿಸಿದ್ದಾರೆ.