ಬೆಂಗಳೂರು, ಏ. 18 (DaijiworldNews/HR): ಕೊರೊನಾ ಚಿಕಿತ್ಸೆಗೆ ಬಳಕೆ ಮಾಡಲಾಗುವ ರೆಮ್ಡಿಸಿವಿರ್ ಚುಚ್ಚು ಮದ್ದನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ರೆಮ್ಡಿಸಿವಿರ್ ಔಷಯನ್ನು ಅಕ್ರಮವಾಗಿ ಅಡಗಿಸಿಟ್ಟು ಕೃತಕ ಅಭಾವ ಸೃಷ್ಟಿಸುತ್ತಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಸಿಸಿಬಿ ಪೊಲೀಸರು ತಪಾಸಣಾ ಕಾರ್ಯವನ್ನು ಕೈಗೊಂಡಿದ್ದಾರೆ.
ಇನ್ನು ತಪಾಸಣೆ ವೇಳೆ ಸುದ್ದಗುಂಟೆ ಪಾಳ್ಯದ ರಾಜೇಶ್, ಶಕೀಬ್, ಸೋಹಿಲ್ ಎಂಬವರನ್ನು ಬಂಧಿಸಲಾಗಿದೆ.
ಈ ಆರೋಪಿಗಳು ರೆಮ್ಡಿಸಿವಿರ್ ಔಷಯನ್ನು ಅಕ್ರಮವಾಗಿ ದಾಸ್ತಾನು ಮಾಡಿ ಪ್ರತಿ ಬಾಟಲ್ಗೆ 10,500 ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಸಿಸಿಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.