ಮುಂಬೈ, ಎ.18 (DaijiworldNews/PY): ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯ ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿರುವ ಘಟನೆ ಎಪ್ರಿಲ್ 18ರ ರವಿವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತರನ್ನು ವಿಲಾಸ್ ಕದಂ (36) ಸಚಿನ್ ತಳವಾರ್ (22) ಹಾಗೂ ಮಂಗೇಶ್ ಜಾಮ್ಕರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರತ್ನಗಿರಿ ಜಿಲ್ಲೆಯ ಖೇದ್ ತಾಲೂಕಿನಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಯ ಘಟಕದಲ್ಲಿ ಮುಂಜನೆ ಸ್ಪೋಟವಾದ ಕಾರಣ ಬೆಂಕಿ ಹತ್ತಿಕೊಂಡಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಗೆ ನಿಖರವಾದ ಕರಣ ತಿಳಿದುಬಂದಿಲ್ಲ. ಪೊಲೀಸರ್ ತನಿಖೆ ಕೈಗೊಂಡಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.