ನವದೆಹಲಿ, ಏ. 18 (DaijiworldNews/SM): ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ತುರ್ತು ಆರೋಗ್ಯ ಪರಿಸ್ಥಿತಿ ಜಾರಿಗೊಳಿಸಬೇಕೆಂದು ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಚುನಾವಣಾ ರ್ಯಾಲಿಗಳನ್ನೂ ಕೂಡ ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳು, ಚೇತರಿಕೆಗಿಂತಲೂ ಹೆಚ್ಚಾಗುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಜಾರಿಗೊಳಿಸಬೇಕು. ಇದರ ಜೊತೆಗೆ ಚುನಾವಣಾ ಆಯೋಗವು ಚುನಾವಣಾ ರ್ಯಾಲಿ ನಿರ್ಬಂಧಿಸಬೇಕು. ನ್ಯಾಯಾಲಯಗಳು ಜನರ ಜೀವನ ಕಾಪಾಡಬೇಕು ಎಂದು ಕಪಿಲ್ ಸಿಬಲ್ ಟ್ವೀಟ್ ಮಾಡಿದ್ದಾರೆ.