ಚೆನ್ನೈ, ಏ. 18 (DaijiworldNews/SM): ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ರಾತ್ರಿ 10 ಗಂಟೆಯಿಂದ ಬೆಳಗ್ಗೆ 4 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೆ ಸರಕಾರ ಮುಂದಾಗಿದೆ. ಅಲ್ಲದೆ ರವಿವಾರದಂದು ಸಂಪೂರ್ಣ ಲಾಕ್ ಡೌನ್ ಜಾರಿಗೆ ತರಲು ಸರಕಾರ ನಿರ್ಧರಿಸಿದೆ. ಏಪ್ರಿಲ್ 20ರ ಮಂಗಳವಾರದಿಂದ ನಿರ್ಬಂಧಗಳು ಅನ್ವಯವಾಗಲಿವೆ ಎಂದು ಸರಕಾರ ಸ್ಪಷ್ಟಪಡಿಸಿದೆ.
ಈ ನಡುವೆ 12 ತರಗತಿ ಬೋರ್ಡ್ ಪರೀಕ್ಷೆಯನ್ನು ಕೂಡ ಸರಕಾರ ಮುಂದೂಡಿದೆ. ಕೇವಲ ಆನ್ ಲೈನ್ ತರಗತಿಗಳನ್ನು ಮಾತ್ರ ತೆಗೆದುಕೊಳ್ಳುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿದೆ.