ದಾವಣಗೆರೆ, ಎ.19 (DaijiworldNews/PY): ಶಾಸಕ ಎಂ.ಪಿ. ರೇಣುಕಾಚಾರ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಫೇಸ್ ಬುಕ್ನಲ್ಲಿ ಬರೆದುಕೊಂಡಿರುವ ಅವರು, "ನನಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಐಸೋಲೇಶನ್ ಗೆ ಒಳಗಾಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕದಲ್ಲಿದ್ದ ಎಲ್ಲರೂ ಆದಷ್ಟು ಬೇಗ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ವಿನಂತಿಸುತ್ತೇನೆ. ಆದಷ್ಟು ಬೇಗ ಗುಣಮುಖನಾಗಿ ಮತ್ತೆ ನಿಮ್ಮ ಸೇವೆಗೆ ಮರಳುತ್ತೇನೆ" ಎಂದು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಒಂದೇ ದಿನ 19,067 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 81 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 1,16,1065 ಕೊರೊನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ ಸುಮಾರು 10,14,152 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 1,33,543 ಸಕ್ರಿಯ ಪ್ರಕರಣಗಳಿವೆ.