ದೆಹಲಿ, ಏ. 19 (DaijiworldNews/HR): ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ದೆಹಲಿಯಲ್ಲಿ ಇಂದು ರಾತ್ರಿಯಿಂದ ಏಪ್ರಿಲ್ 26ರ ಸಂಜೆ 5 ರವರೆಗೆ ಲಾಕ್ಡೌನ್ ವಿಧಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರು ದೆಹಲಿಯಲ್ಲಿನ ಕೊರೊನಾ ಪರಿಸ್ಥಿತಿಯ ಬಗ್ಗೆ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ಆದೇಶ ಹೊರಡಿಸಿದ್ದಾರೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 25,462 ಸೊಂಕು ಪ್ರಕರಣಗಳು ದಾಖಲಾಗಿದ್ದು, ಇದು ಈ ವರೆಗಿನ ಗರಿಷ್ಠ ದೈನಂದಿನ ಪ್ರಕರಣಗಳಾಗಿವೆ. ಆ ಮೂಲಕ ದೆಹಲಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 8,53,460ಕ್ಕೆ ಏರಿಕೆಯಾಗಿದೆ.
ಇನ್ನು ದೆಹಲಿಯಲ್ಲಿ ಕೊರೊನಾ ಪರಿಸ್ಥಿತಿ ತುಂಬಾ ಗಂಭೀರವಾಗಿದ್ದು, ಹಾಸಿಗೆಗಳು ಮತ್ತು ಆಮ್ಲಜನಕದ ದೊಡ್ಡ ಕೊರತೆ ಕಾನಿಸುತ್ತಿದ್ದು, ದೆಹಲಿಯ ಕೇಂದ್ರ ಸರ್ಕಾರಿ ಆಸ್ಪತ್ರೆಗಳಲ್ಲಿನ 10,000 ಹಾಸಿಗೆಗಳಲ್ಲಿ ಕನಿಷ್ಠ 7,000 ಹಾಸಿಗೆಗಳನ್ನು ಕೊರೊನಾ ರೋಗಿಗಳಿಗೆ ಮೀಸಲಿಡಬೇಕು ಮತ್ತು ದೆಹಲಿಯಲ್ಲಿ ತಕ್ಷಣವೇ ಆಮ್ಲಜನಕವನ್ನು ಒದಗಿಸಬೇಕು ಎಂದು ನಾನು ವಿನಂತಿಸುತ್ತೇನೆ ಎಂದು ಸಿಎಂ ಕೇಜ್ರಿವಾಲ್ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಇನ್ನು ಈ ಆರು ದಿನಗಳಲ್ಲಿ ಹೆಚ್ಚು ಹಾಸಿಗೆಗಳ ವ್ಯವಸ್ಥೆ ಮಾಡಲಾಗುತ್ತದೆ, ಈ ಲಾಕ್ಡೌನ್ ಸಂದರ್ಭವನ್ನು ಆಮ್ಲಜನಕ ಶೇಖರಣೆ, ಔಷಧಗಳ ಶೇಖರಣೆಗೆ ಬಳಕೆ ಮಾಡಲಾಗುತ್ತದೆ. ಪ್ರತಿಯೊಬ್ಬರೂ ಲಾಕ್ಡೌನ್ ನಿಯಮ ಪಾಲಿಸುವಂತೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.