ಬೆಂಗಳೂರು,ಏ. 19 (DaijiworldNews/HR): ಸಾರಿಗೆ ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಂಗಳೂರಿನಲ್ಲಿ ಬಂಧನವಾಗಿದೆ ಎಂದು ತಿಳಿದು ಬಂದಿದೆ.
ಸಾರಿಗೆ ನೌಕರರ ಪ್ರತಿಭಟನೆ, ಚಾಲಕರ ಮೇಲೆ, ಸರ್ಕಾರಿ ಬಸ್ ಗಳ ಮೇಲೆ ಕಲ್ಲು ತೂರಾಟ ಹಿನ್ನೆಲೆಯಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಕಚೇರಿಯಲ್ಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಉಪವಾಸ ಸತ್ಯಾಗ್ರಹಕ್ಕೆ ಮುಂದಾಗಿದ್ದು ಈ ವೇಳೆ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ 15 ಕ್ಕೂ ಹೆಚ್ಚು ಜನರನ್ನು ಪೊಲೀಸರು ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.