ಕೋಲ್ಕತಾ, ಏ.19 (DaijiworldNews/MB) : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತ್ತಾದಲ್ಲಿ ಪ್ರಚಾರ ಮಾಡುವುದಿಲ್ಲ ಎಂದು ಟಿಎಂಸಿ ಹೇಳಿದೆ.
ಈ ಬಗ್ಗೆ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒಬ್ರಿಯಾನ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ''ಮಮತಾ ಬ್ಯಾನರ್ಜಿ ಇನ್ನು ಮುಂದೆ ಕೋಲ್ಕತ್ತಾದಲ್ಲಿ ಪ್ರಚಾರ ಮಾಡುವುದಿಲ್ಲ. ಏಪ್ರಿಲ್ 26 ರಂದು ನಗರದಲ್ಲಿ ಪ್ರಚಾರದ ಕೊನೆಯ ದಿನದಂದು ಕೇವಲ ಒಂದು ಸಾಂಕೇತಿಕ ಸಭೆ ನಡೆಸಲಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಅವರ ಎಲ್ಲಾ ಚುನಾವಣಾ ರ್ಯಾಲಿಗಳ ಸಮಯವನ್ನು ಕಡಿತಗೊಳಿಸಲಾಗಿದೆ. ಕೇವಲ 30 ನಿಮಿಷಗಳಿಗೆ ನಿರ್ಬಂಧಿಸಲಾಗಿದೆ'' ಎಂದು ತಿಳಿಸಿದ್ದಾರೆ.
ಇನ್ನು ಪಶ್ಚಿಮ ಬಂಗಾಳದಲ್ಲಿ ಕೊರೊನಾ ಅಧಿಕವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ''ಪಕ್ಷ ಕೋಲ್ಕತಾದಲ್ಲಿ ಸಣ್ಣ ಸಭೆಗಳನ್ನು ನಡೆಸಲಿದೆ. ಉಳಿದ ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಕಿರು ಭಾಷಣೆ ಮಾಡುತ್ತೇನೆ'' ಎಂದು ಹೇಳಿದ್ದಾರೆ.