ಬೆಂಗಳೂರು, ಏ. 19 (DaijiworldNews/HR): ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕಮಾರ್ ಅವರ ಆಪ್ತ ಸಹಾಯಕ ಎಚ್.ಜೆ. ರಮೇಶ್ ಅವರು ಕೊರೊನಾ ಸೋಂಕಿಗೆ ಇಂದು ಬೆಳಿಗ್ಗೆ ಬಲಿಯಾಗಿದ್ದಾರೆ.
ಏ. 13ರಂದು ರಮೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಕಾರಣ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ.
ಇನ್ನು ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರಿಗೆ ಉಸಿರಾಟ ಸಮಸ್ಯೆ ಎದುರಾದಾಗ, ತಕ್ಷಣ ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಸಿಗಲಿಲ್ಲ. ಆಕ್ಸಿಜನ್ ಕೊರತೆಯಿಂದ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ.
ರಮೇಶ್ ಸಾವಿನ ಕುರಿತು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಸುರೇಶ್ಕುಮಾರ್, "ನಮ್ಮ ಕ್ಷೇತ್ರದ ಅನೇಕರನ್ನು ವಿವಿಧ ಆಸ್ಪತ್ರೆಗಳಿಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಉಳಿಸಿದ್ದ, ನನ್ನ ಆಪ್ತ ಸಹಾಯಕ ಎಚ್.ಜೆ. ರಮೇಶ್ ಇನ್ನಿಲ್ಲ" ಎಂದು ಬರೆದುಕೊಂಡಿದ್ದಾರೆ.