ತಿರುವನಂತಪುರಂ, ಏ. 19 (DaijiworldNews/SM): ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ಕೇರಳ ಸರಕಾರ ಮಹತ್ವದ ಕ್ರಮಕೈಗೊಂಡಿದೆ.
ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆ ತನಕ ಕರ್ಫ್ಯೂ ಜಾರಿಗೊಳಿಸಿ ಸರಕಾರದ ಮುಖ್ಯಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಮುಂದಿನ ಎರಡು ವಾರಗಳ ಕಾಲ ಕರ್ಫ್ಯೂ ಜಾರಿಗೊಳಿಸಿ ಸರಕಾರದ ಮುಖ್ಯಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಪ್ರತಿನಿತ್ಯ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆ ತನಕ ವಾಹನ, ಜನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಯಾವುದೇ ನಿರ್ಬಂಧ ವಿಧಿಸಿಲ್ಲ.