ನವದೆಹಲಿ, ಏ. 19 (DaijiworldNews/SM): ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್ ವಿರುದ್ಧದ ಲಸಿಕೆ ಪಡೆಯಲು ಅರ್ಹರು ಎಂದು ಕೇಂದ್ರ ಸರ್ಕಾರ ಸೋಮವಾರ ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
"ಗರಿಷ್ಠ ಸಂಖ್ಯೆಯ ಭಾರತೀಯರು ಕಡಿಮೆ ಸಮಯದಲ್ಲಿ ಲಸಿಕೆ ಪಡೆಯಲು ಸಮರ್ಥರಾಗಿದ್ದಾರೆ ಎಂದು ಖಚಿತಪಡಿಸಿಕೊಳ್ಳಲು ಸರ್ಕಾರವು ಒಂದು ವರ್ಷದಿಂದ ಶ್ರಮಿಸುತ್ತಿದೆ. ಭಾರತವು ವಿಶ್ವ ದಾಖಲೆಯ ವೇಗದಲ್ಲಿ ಜನರಿಗೆ ಲಸಿಕೆ ನೀಡುತ್ತಿದೆ ಮತ್ತು ನಾವು ಇದನ್ನು ಇನ್ನೂ ಹೆಚ್ಚಿನ ವೇಗದಲ್ಲಿ ಮುಂದುವರಿಸುತ್ತೇವೆ" ಎಂದು ಮೋದಿ ಹೇಳಿದ್ದಾರೆ.
ವ್ಯಾಕ್ಸಿನೇಷನ್ ಡ್ರೈವ್ನ 3 ನೇ ಹಂತದಲ್ಲಿ, ಲಸಿಕೆ ತಯಾರಕರು ತಮ್ಮ ಮಾಸಿಕ ಕೇಂದ್ರ ಡ್ರಗ್ಸ್ ಲ್ಯಾಬೊರೇಟರಿಯ ಶೇಕಡಾ 50 ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಾರೆ. ಮತ್ತು ಉಳಿದ 50 ಶೇಕಡಾ ಪ್ರಮಾಣವನ್ನು ರಾಜ್ಯ ಸರ್ಕಾರಕ್ಕೆ ಪೂರೈಸಲಾಗುತ್ತದೆ. "ಬೆಲೆಯ ಆಧಾರದ ಮೇಲೆ ರಾಜ್ಯ ಸರ್ಕಾರಗಳು, ಖಾಸಗಿ ಆಸ್ಪತ್ರೆಗಳು, ಕೈಗಾರಿಕಾ ಸಂಸ್ಥೆಗಳು ಉತ್ಪಾದಕರಿಂದ ಲಸಿಕೆ ಪ್ರಮಾಣವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.
ಹೆಚ್ಚುವರಿ ಲಸಿಕೆ ಪ್ರಮಾಣವನ್ನು ನೇರವಾಗಿ ಉತ್ಪಾದಕರಿಂದ ಸಂಗ್ರಹಿಸಲು ರಾಜ್ಯಗಳಿಗೆ ಅಧಿಕಾರ ನೀದಲಾಗಿದೆ. ಜೊತೆಗೆ 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವರ್ಗದ ಜನರು ಲಸಿಕೆ ಪಡೆಯಬಹುದಾಗಿದೆ.