ಅಲಹಾಬಾದ್, ಏ. 20 (DaijiworldNews/HR): ಉತ್ತರ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಗುತ್ತಿದ್ದು, ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದ್ದು, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಹೇಳಿದೆ.
ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಲಖನೌ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು.
ಕೊರೊನಾ ಹೆಚ್ಚಳವಾಗುತ್ತಿರುವ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದ್ದು, ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಇನ್ನು ರಾಜ್ಯದಲ್ಲಿರುವ ಕ್ವಾರಂಟೈನ್ ಕೇಂದ್ರಗಳ ಸ್ಥಿತಿ ಹಾಗೂ ಕೊರೊನಾ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುವ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಿದ್ಧಾರ್ಥ ವರ್ಮಾ ಮತ್ತು ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಐದು ನಗರಗಳಲ್ಲಿ ಲಾಕ್ಡೌನ್ಗೆ ಆದೇಶಿಸಿತ್ತು.