ಭೋಪಾಲ್, ಏ. 20 (DaijiworldNews/HR): ಕೊರೊನಾ ನಿಯಂತ್ರಣಕ್ಕೆ ಮಧ್ಯ ಪ್ರದೇಶದಲ್ಲಿ ಸರ್ಕಾರ ಅನೇಕ ಕ್ರಮಗಳನ್ನು ಕೈಗೊಂಡಿದ್ದು, ಅರ್ಹ ಪಡಿತರ ಚೀಟಿದಾರರಿಗೆ ಮುಂದಿನ ಮೂರು ತಿಂಗಳ ಅವಧಿಗೆ ಉಚಿತ ಪಡಿತರ ನೀಡಲು ಮುಂದಾಗಿದೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ಉಚಿತ ಪಡಿತರ ಘೋಷಣೆ ಮಾಡಿದ್ದು, ಲಸಿಕೆ ಮತ್ತು ಔಷಧ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನು "ರಾಜ್ಯದ ಎಲ್ಲ ಅರ್ಹ ಫಲಾನುಭವಿಗಳಿಗೆ ಉಚಿತ ಪಡಿತರ ನೀಡುವುದರೊಂದಿಗೆ ಅಗತ್ಯ ವಸ್ತುಗಳ ಲಭ್ಯತೆಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಅವರು, ಜನರು ಅವಶ್ಯ ವಸ್ತುಗಳನ್ನು ಪಡಿತರ ವ್ಯವಸ್ಥೆ ಮೂಲಕ ಖರೀದಿಸಿ, ಆಗಾಗ ಹೊರಗಡೆ ಹೋಗದಂತೆ ನೋಡಿಕೊಳ್ಳಬೇಕು" ಎಂದು ತಿಳಿಸಿದ್ದಾರೆ.