ಬೆಂಗಳೂರು, ಏ 20(DaijiworldNews/MS): ರಾಜ್ಯದಲ್ಲಿ ಕೊರೊನಾದ ಎರಡನೇ ಅಲೆ ಬಲವಾಗುತ್ತಿರುವ ಹಿನ್ನಲೆಯಲ್ಲಿ ವಿದ್ಯಾರ್ಥಿಗಳನ್ನು 1 ರಿಂದ 9ನೇ ತರಗತಿ ಪರೀಕ್ಷೆ ಇಲ್ಲದೆ ವಿಶ್ಲೇಷಣಾ ಮೌಲ್ಯಾಂಕನ ಆಧರಿಸಿ ಪಾಸ್ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಕೊರೊನಾ ಹಿನ್ನಲೆಯಲ್ಲಿ ಪರೀಕ್ಷೆ ನಡೆಸೋದು ಕಷ್ಟ ಎಂಬುದಾಗಿ ತಜ್ಞರು ಅಭಿಪ್ರಯಾ ಪಟ್ಟ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್ಕುಮಾರ್ ಮೌಖಿಕ ಆದೇಶ ನೀಡಿದ್ದು ಪರೀಕ್ಷೆ ಇಲ್ಲದೆ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ಲಭಿಸಿದೆ.
ಇನ್ನು ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.