ಚಿಕ್ಕಮಗಳೂರು, ಏ. 20 (DaijiworldNews/HR): ಬೆಂಗಳೂರಿಂದ ಶಿವಮೊಗ್ಗಕ್ಕೆ ಬಿಯರ್ ಬಾಟಲಿ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿರುವ ಘಟನೆ ಶಿವಮೊಗ್ಗ-ತರಿಕೇರಿ ರಸ್ತೆಯ ಎಂ.ಸಿ.ಹಳ್ಳಿಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಈ ಬಗ್ಗೆ ಮಾಹಿತಿ ತಿಳಿದುಕೊಂಡ ಎಂ.ಸಿ.ಹಳ್ಳಿ ಹಳ್ಳಿ ಸೇರಿದಂತೆ ಸುತ್ತ ಮುತ್ತಲಿನ ಸಾವಿರಾರು ಮಂದಿ ಪಲ್ಟಿಯಾದ ಲಾರಿಯಿಂದ ಬಿಯರ್ ಬಾಟಲಿಗಳನ್ನು ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಸಿಕ್ಕಿ ಬಿದ್ದ ಲಾರಿ ಡೈವರ್ ಅನ್ನು ಕೂಡ ಸ್ಥಳದಲ್ಲಿದ್ದ ಜನತೆ ಕಾಪಾಡದೇ ತಮ್ಮ ಪಾಡಿಗೆ ತಾವು ಬಿಯರ್ಬಾಟಲಿಗಳನ್ನು ತೆಗೆದುಕೊಂಡು ಹೋಗಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡ ತರಿಕೇರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಜನರನ್ನ ಚದುರಿಸಲು ಪೊಲೀಸರು ಹರಸಾಹಾಸ ಪಟ್ಟಿದ್ದಾರೆ ಎನ್ನಲಾಗಿದೆ.