ನವದೆಹಲಿ, ಏ. 20 (DaijiworldNews/HR): ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೂ ದೃಢಪಟ್ಟಿದೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ರಾಹುಲ್, "ನನಗೆ ರೋಗಲಕ್ಷಣಗಳು ಕಂಡುಬಂದ ಬಳಿಕ ಕೊರೊನಾ ಸೋಂಕು ಪತ್ತೆಯಾಗಿದೆ, ಇತ್ತೀಚೆಗೆ ನನ್ನೊಂದಿಗೆ ಸಂಪರ್ಕದಲ್ಲಿರುವ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ" ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ಸಿನ ಮತ್ತೊಬ್ಬ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಕೂಡ ಕೊರೊನಾ ಸೊಂಕು ದೃಢಫಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.