ಬೆಂಗಳೂರು, ಏ. 20 (DaijiworldNews/HR): ಕರ್ನಾಟಕದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯಪಾಲ ವಿ.ಆರ್.ವಾಲಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಕಠಿಣ ನಿಯಮ ಹಾಗೂ ಲಾಕ್ಡೌನ್ ಜಾರಿ ಮಾಡುವ ಕುರಿತು ವಿವಿಧ ಪಕ್ಷಗಳ ನಾಯಕರು ಸಲಹೆ ನೀಡಿದ್ದಾರೆ.
ಸರ್ವಪಕ್ಷ ಸಭೆಯಲ್ಲಿ ಮಾತನಾಡಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ, ಕೊರೊನಾ ನಿಯಂತ್ರಣಕ್ಕೆ ಲಾಕ್ಡೌನ್ ಮಾಡುವ ಅಗತ್ಯವಿದ್ದು, 15 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕೊರೊನಾ ಕೇಸ್ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವಂತೆ ಸಲಹೆ ನೀಡಿದ್ದಾರೆ.
ಇನ್ನು ಕಳೆದ ಬಾರಿ ಲಾಕ್ಡೌನ್ ಜಾರಿ ಮಾಡಿದಾಗ ಆರ್ಥಿಕ ಸಂಕಷ್ಟ ಎದುರಾಗಿದ್ದು ನಿಜ, ಆದರೆ ಸಧ್ಯದ ಕೊರೊನಾ ಪರಿಸ್ಥಿತಿ ಗಮನಿಸಿದರೆ ಸೋಂಕು ನಿಯಂತ್ರಣಕ್ಕೆ ಲಾಕ್ಡೌನ್ ಅನಿವಾರ್ಯವಾಗಿದ್ದು, 15 ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಿ ಬಡವರಿಗೆ 1 ತಿಂಗಳ ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
ನೈಟ್ ಕರ್ಫ್ಯೂ ಜಾರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಇದರಿಂದ ಸೋಂಕು ನಿಯಂತ್ರಣ ಸಾಧ್ಯವೂ ಇಲ್ಲ ಎಂದು ಹೇಳಿದ್ದಾರೆ.