ನವದೆಹಲಿ, ಎ.21 (DaijiworldNews/PY): ದೇಶದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,95,041 ಲಕ್ಷ ಹೊಸ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೆ 2,023 ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ 2,95,041 ಸೋಂಕು ಪ್ರಕರಣಗಳು ವರದಿಯಾಗಿದೆ. 1,67,457 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 1,32,76,039 ಮಂದಿ ಗುಣಮುಖರಾಗಿದ್ದಾರೆ. ಸದ್ಯ 21,57538 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ 62,097 ಪ್ರಕರಣಗಳು, ಉತ್ತರ ಪ್ರದೇಶ 29,574 ಪ್ರಕರಣ, ದೆಹಲಿ 28,395 ಪ್ರಕರಣ ಕರ್ನಾಟಕ 21,794 ಪ್ರಕರಣ ಹಾಗೂ ಕೇರಳದಲ್ಲಿ 19,577 ಪ್ರಕರಣಗಳು ವರದಿಯಾಗಿವೆ.
ಈ ಐದು ರಾಜ್ಯಗಳಲ್ಲಿ ಶೇ.54.72ರಷ್ಟು ಹೊಸ ಪ್ರಕರಣಗಳು ವರದಿಯಾಗಿವೆ.