ಬೆಂಗಳೂರು, ಏ 22 (DaijiworldNews/MS): ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿದೆ. ಹಾಗಾಗಿ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ' ಎಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ ದೇವೇಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.
ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಕಳವಳ ವ್ಯಕ್ತಪಡಿಸಿ, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದೇವೇಗೌಡರು "ಕೊವೀಡ್ ಎರಡನೇ ಅಲೆ ವೇಗವಾಗಿ ಹರಡುತ್ತಿದೆ, ಇದರಿಂದ ಹೆಚ್ಚೆಚ್ಚು ಜನರು ಸೋಂಕಿತರಾಗುತ್ತಿದ್ದಾರೆ" ಎಂದು ಹೇಳಿದ್ದಾರೆ.
ಸೋಂಕಿತರ ಸಂಖ್ಯೆ ಏಕಾಏಕಿ ಹೆಚ್ಚಾಗುತ್ತಿರುವುದರಿಂದ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಗಳು ಹಲವು ಸವಾಲು ಎದುರಿಸುತ್ತಿವೆ, ಹಲವರಿಗೆ ಬೆಡ್ ಸಿಗುತ್ತಿಲ್ಲ, ಸರಿಯಾದ ಔಷಧಿ ದೊರಕುತ್ತಿಲ್ಲ, ಎಂದು ಪತ್ರದಲ್ಲಿ ಬರೆದಿದ್ದಾರೆ. ಹೀಗಾಗಿ ಸರ್ಕಾರ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯ ಒದಗಿಸಬೇಕೆಂದು ಪತ್ರದಲ್ಲಿಒತ್ತಾಯಿಸಿದ್ದಾರೆ.