ನವದೆಹಲಿ, ಏ 22 (DaijiworldNews/MS): ದೇಶದಲ್ಲಿ ಕೊರೊನಾ ಸೋಂಕಿನ 2ನೇ ಅಲೆ ಏರುಗತಿಯಲ್ಲಿ ಸಾಗುತ್ತಿದ್ದು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,14,835 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,59,30,965ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,104 ಮಂದಿ ಕೊರೊನಾ ಮಹಾಮಾರಿಗೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 1,84,657 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 22,91, 428 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 1,34, 54,880 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,78,841 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ 16,51,711 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಏಪ್ರಿಲ್ 21ರವರೆಗೆ 27,27,05,103 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 13,23,30,644 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.