ಬೆಂಗಳೂರು, ಏ.22 (DaijiworldNews/MB) : ಕೊರೊನಾ ಸೋಂಕು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆ ಬ್ಯಾಂಕ್ಗಳ ಸೇವಾ ಸಮಯವನ್ನು ಕಡಿತಗೊಳಿಲಾಗಿದ್ದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಮಾತ್ರ ಸಾರ್ವಜನಿಕರಿಗೆ ಬ್ಯಾಂಕ್ ಒಳಗೆ ಅವಕಾಶ ನೀಡಲಾಗಿದೆ.
ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ ಕರ್ನಾಟಕ ಬ್ಯಾಂಕರುಗಳ ಸಮಿತಿಯು ಮಂಡಳಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಸೇವಾ ಸಮಯ ಕಡಿತಗೊಳಿಸಿದೆ. ಇಂದಿನಿಂದ ಮೇ 31ರವರೆಗೆ ಈ ನಿಯಮ ಜಾರಿಯಲ್ಲಿರಲಿದೆ. ಹಾಗೆಯೇ ಶೇ. 50ರಷ್ಟು ಸಿಬ್ಬಂದಿ ಮಾತ್ರ ಕಾರ್ಯ ನಿರ್ವಹಿಸಬೇಕು ಎಂದು ಆದೇಶ ಹೊರಡಿಸಿದೆ. ಕೆಲವು ಬ್ಯಾಂಕ್ ನೌಕರರಿಗೆ ವರ್ಕ್ ಫ್ರಮ್ ಹೋಂಗೆ ಅವಕಾಶ ನೀಡಲಾಗಿದೆ.
ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಬ್ಯಾಂಕರುಗಳ ಸಮಿತಿಯು ಈ ಬದಲಾವಣೆ ಮಾಡಿದೆ. ಬ್ಯಾಂಕ್ನ ಎಟಿಎಂ ಕೇಂದ್ರಗಳಲ್ಲಿ ಹಣ ದೊರೆಯಲಿದ್ದು ಯಂತ್ರ ಬಳಸುವ ಸಂದರ್ಭ ಸಾನಿಟೈಸರ್ ಬಳಸಬೇಕು ಎಂದು ಸಮಿತಿ ತಿಳಿಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಈಗಾಗಲೇ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6 ಗಂಟೆ ತನಕ ನೈಟ್ ಕರ್ಫ್ಯೂ ಜಾರಿಯಲ್ಲಿದೆ. ಹಾಗೆಯೇ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಸಂದರ್ಭದಲ್ಲಿ ಬೆಳಿಗ್ಗೆ 11 ಗಂಟೆಯ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ. ಮುಂದಿನ ಏಳು ದಿನಗಳ ಕಾಲ ಶಾಲಾ-ಕಾಲೇಜುಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.