ಮೈಸೂರು, ಏ.22 (DaijiworldNews/MB) : ಇಂದಿನಿಂದ ನಡೆಯಲಿದ್ದ ವೈದ್ಯಕೀಯ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಕೊರೊನಾ ಹಿನ್ನೆಲೆಯಲ್ಲಿ ಎರಡು ತಿಂಗಳುಗಳವರೆಗೆ ಪರೀಕ್ಷೆಗಳನ್ನು ಮುಂದೂಡಲು ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯಕೀಯ ಶಿಕ್ಷಣದ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೊರೊನಾ ಕೆಲಸಕ್ಕೆ ಬಳಸಿಕೊಳ್ಳಲಾಗುವುದು. ಸ್ನಾತಕೋತ್ತರ, ಪದವಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು.
ಆರೋಗ್ಯ ಸೇವೆಯಲ್ಲಿ ಮುಂದುವರೆದ ರಾಷ್ಟ್ರಗಳು ಕೂಡಾ ಕೊರೊನಾ ನಿಯಂತ್ರಣದಲ್ಲಿ ವಿಫಲವಾಗಿದೆ. ಇಡೀ ಮನುಕುಲಕ್ಕೆ ಕೊರೊನಾ ಬಂದಿದೆ. ಹೀಗಿರುವಾಗ ವಿಪಕ್ಷ ನಾಯಕರು ಹಾಗೂ ಆಡಳಿತ ಪಕ್ಷದವರು ಆರೋಪ ಪ್ರತ್ಯಾರೋಪ ಮಾಡುವ ಬದಲು ಕೊರೊನಾ ನಿಯಂತ್ರಣಕ್ಕೆ ಕೈಜೋಡಿಸಬೇಕು. ಸುಮ್ಮನೆ ಆರೋಪ, ಪ್ರತ್ಯಾರೋಪ ಮಾಡಿ ಸಣ್ಣವರಾಗಬೇಡಿ ಎಂದು ಹೇಳಿದರು.
ಇನ್ನು ಕೊರೊನಾ ಪರಿಸ್ಥಿತಿ ರಾಜ್ಯದಲ್ಲಿ ಇದೇ ರೀತಿ ಮುಂದುವರೆದರೆ ಆಕ್ಸಿ ಜನ್ ಅವಶ್ಯಕತೆ ಬೇಕಾಗುತ್ತದೆ. ಈಗಾಗಲೇ ಕೈಗಾರಿಕೆ, ಗೃಹ ಸಚಿವರು ಹಾಗೂ ನಾನು ಕೈಗಾರಿಕೋದ್ಯಮಿಗಳೊಂದಿಗೆ ಮಾತನಾಡಿ ಆಕ್ಸಿಕನ್ ನೀಡಲು ಮನವಿ ಮಾಡಿದ್ದು ಅವರು ಸಮ್ಮತಿಸಿದ್ದಾರೆ ಎಂದರು.
ಇನ್ನು ಮುಖ್ಯಮಂತ್ರಿಗಳು ಕೇಂದ್ರ ಆರೋಗ್ಯ ಸಚಿವರಿಗೆ 1.5 ಲಕ್ಷ ಮೆಟ್ರಿಕ್ ಟನ್ ಆಕ್ಸಿಜನ್ಗೆ ಬೇಡಿಕೆ ಇಟ್ಟು ಪತ್ರ ಬರೆದಿದ್ದಾರೆ. ಈ ಹಿನ್ನೆಲೆ ಆಕ್ಸಿಜನ್ ಕೊರತೆ ಉಂಟಾಗುವುದಿಲ್ಲ ಎಂದು ಕೂಡಾ ತಿಳಿಸಿದರು.