ನವದೆಹಲಿ, ಏ.22 (DaijiworldNews/MB) : ನಾಳೆ ಪಶ್ಚಿಮ ಬಂಗಾಳಕ್ಕೆ ತಮ್ಮ ಪ್ರಚಾರ ಪ್ರವಾಸವನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಟ್ವಿಟರ್ ಮೂಲಕ ತಿಳಿಸಿದ್ದಾರೆ. ಹಾಗೆಯೇ ಕೊರೊನಾ ಪರಿಸ್ಥಿತಿ ಬಗ್ಗೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತೇನೆ'' ಎಂದು ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ''ನಾಳೆ, ಕೊರೊನಾ ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆ ನಡೆಸಲಾಗುವುದು. ಆ ಕಾರಣದಿಂದ ನಾನು ಪಶ್ಚಿಮ ಬಂಗಾಳಕ್ಕೆ ಹೋಗುವುದಿಲ್ಲ'' ಎಂದು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದ ಚುನಾವಣೆ ಮಾರ್ಚ್ 27 ರಂದು ಪ್ರಾರಂಭವಾಗಿದ್ದು ಇಂದಿನ ಆರನೇ ಹಂತದ ಮತದಾನದ ನಂತರ ಇನ್ನೂ ಎರಡು ಹಂತಗಳು ಉಳಿದಿವೆ. ಏಪ್ರಿಲ್ 26 ಮತ್ತು 29 ರಂದು ಮತದಾನ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.
ಏತನ್ಮಧ್ಯೆ, ಹದಗೆಟ್ಟಿರುವ ಕೊರೊನಾ ಪರಿಸ್ಥಿತಿಯು ವೈದ್ಯಕೀಯ ಆಮ್ಲಜನಕ ಮತ್ತು ಹಾಸಿಗೆಗಳ ಬೇಡಿಕೆಯ ಹೆಚ್ಚಳವನ್ನು ಕಂಡಿದೆ.