ತಿರುವನಂತಪುರ, ಏ. 22(DaijiworldNews/HR): ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ನಾಯರ್ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಸಾಂಧರ್ಭಿಕ ಚಿತ್ರ
ಈ ಹಗರಣಕ್ಕೆ ಸಂಬಂಧಿಸಿದ ವಿಚಾರಣೆಗೆ ಸರಿತಾ ನಾಯರ್ ಗೈರಾಗಿದ್ದದ್ದು, ಈ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ನ ಕೋರ್ಟ್ ಬಂಧನ ವಾರಂಟ್ ಹೊರಡಿಸಿತ್ತು. ಇದರ ಬೆನ್ನಲ್ಲೇ ಸರಿತಾ ಅವರನ್ನು ಬಂಧಿಸಿದ ಪೊಲೀಸರು ನಂತರ, ಕೋಯಿಕ್ಕೋಡ್ನಲ್ಲಿರುವ ಕೋರ್ಟ್ಗೆ ಹಾಜರುಪಡಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಪ್ರಕರಣಕ್ಕೆ ಸರಿತಾ ನಾಯರ್ ಹಾಗೂ ಬಿಜು ರಾಧಾಕೃಷ್ಣನ್ ಪ್ರಮುಖ ಆರೋಪಿಗಳು. ಅವರು 'ಟೀಮ್ ಸೋಲಾರ್ ರಿನ್ಯೂಯೇಬಲ್ ಎನರ್ಜಿ ಸೊಲೂಷನ್ಸ್ ಕಂಪನಿ ಸ್ಥಾಪಿಸಿದ್ದರು. ಈ ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಹಲವಾರು ಜನರಿಗೆ ಹಣ ಪಡೆದು ವಂಚಿಸಿದ ಆರೋಪ, ಕೆಲವರಿಗೆ ಏಜೆನ್ಸಿ ಕೊಡುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ.
ಇನ್ನು 2012ರಲ್ಲಿ ಕೋಯಿಕ್ಕೋಡ್ನ ಅಬ್ದುಲ್ ಮಜೀದ್ ಎಂಬುವವರು, ಸೋಲಾರ್ ಮಾರಾಟದ ಏಜೆನ್ಸಿ ಕೊಡುವುದಾಗಿ ಹೇಳಿ ತನ್ನಿಂದ 42.70 ಲಕ್ಷ ಪಡೆದು ಸರಿತಾ ಹಾಗೂ ಬಿಜು ವಂಚಿಸಿದ್ದಾರೆ ಎಂದು ದೂರು ನೀಡಿದ್ದರು.