ಜಮ್ಮು, ಏ. 22(DaijiworldNews/HR): ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ಠಾಕೂರ್ ಪುರಾಣ್ ಸಿಂಗ್(85) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಠಾಕೂರ್ ಅವರು ಕೊರೊನಾ ಸೋಂಕಿನಿಂದ ತುತ್ತಾಗಿದ್ದು, ವೈದ್ಯರ ಸಲಹೆಯ ಮೇರೆಗೆ ರಜೌರಿ ಜಿಲ್ಲೆಯಿಂದ ಚಂಡೀಗಢಕ್ಕೆ ಕರೆದೊಯ್ಯಲಾಗುತ್ತಿತ್ತು, ಆದರೆ ಮಾರ್ಗಮಧ್ಯದಲ್ಲಿ ನಿಧನರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಸಿಂಗ್ ಅವರ ಮೃತದೇಹವನ್ನು ರಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತರಲಾಗಿದ್ದು, ಅಲ್ಲಿ ಶಿಷ್ಟಾಚಾರಗಳ ಪ್ರಕಾರ ಶವಸಂಸ್ಕಾರಕ್ಕೆ ಹೆಚ್ಚಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.