ಬೆಂಗಳೂರು, ಏ. 22(DaijiworldNews/HR): ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು 10 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ.
ಏಪ್ರಿಲ್ 23, ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಮುಖ್ಯಮಂತ್ರಿ ಕಚೇರಿ, "ನಾಳೆ ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ಹತ್ತು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕೋವಿಡ್ ನಿರ್ವಹಣೆ ಕುರಿತಂತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ" ಎಂದು ತಿಳಿಸಿದೆ.