ಆಂಧ್ರಪ್ರದೇಶ, ಏ.23 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಮೇ 1 ರಿಂದ 3ನೇ ಹಂತದ ಕೊರೊನಾ ಲಸಿಕೆ ಆಭಿಯಾನ ಆರಂಭವಾಗುತ್ತಿದ್ದು, ಇದರಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈ ಬಗ್ಗೆ ಆಂಧ್ರಪ್ರದೇಶ ಸರ್ಕಾರ ಮಹತ್ವದ ನಿರ್ಧಾರವೊಂದನ್ನ ತೆಗೆದುಕೊಂಡಿದ್ದು, ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿ ಘೋಷಿಸಿದೆ.
ಇನ್ನು ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಕಚೇರಿ, "ಆಂಧ್ರಪ್ರದೇಶ ಸಿಎಂ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ಒದಗಿಸಲು ನಿರ್ಧರಿಸಿದ್ದಾರೆ" ಎಂದು ಹೇಳಿದೆ.