ನವದೆಹಲಿ, ಏ.24 (DaijiworldNews/HR): ಭಾರತದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,46,786 ಲಕ್ಷ ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,66,10,481ಕ್ಕೆ ಏರಿಕೆಯಾಗಿದೆ.
ಸಾಂಧರ್ಭಿಕ ಚಿತ್ರ
24 ಗಂಟೆಯಲ್ಲಿ ಕೊರೊನಾಗೆ 2,624 ಜನರು ಬಲಿಯಾಗಿದ್ದು, ದೇಶದಲ್ಲಿ ಒಟ್ಟು ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,89,544 ಕ್ಕೆ ಏರಿಕೆಯಾಗಿದೆ.
ಇನ್ನು ದೆಹಲಿ ಮತ್ತು ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಸಾವುಗಳು ದಾಖಲಾಗಿದ್ದು, ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 773 ಮಂದಿ ಕೊರೊನಾಗೆ ಬಲಿಯಾಗಿದ್ದು, ದೆಹಲಿಯಲ್ಲಿ 348 ಸಾವನ್ನಪ್ಪಿದ್ದರೆ ಎಂದು ವರದಿಯಾಗಿದೆ.
ದೇಶದಲ್ಲಿ 25,52,940 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,38,67,997 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,19,838 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ಭಾರತದಲ್ಲಿ ಈವರೆಗೆ 13,83,79,832 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.