ಬೆಂಗಳೂರು, ಏ.24 (DaijiworldNews/HR): ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಲ್ಲಿ ಕಳೆದ 24 ಗಂಟೆಗಳಲ್ಲಿ 124 ಮಂದಿ ಮೃತಪಟ್ಟಿದ್ದು, ಮೊದಲ ಬಾರಿಗೆ 100ಕ್ಕಿಂತ ಹೆಚ್ಚು ಸಾವು ಒಂದೇ ದಿನದಲ್ಲಿ ಸಂಭವಿಸಿದೆ.
ಇನ್ನು ಆರೋಗ್ಯ ಸಿಬ್ಬಂದಿ ಜತೆ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಮಾತನಾಡಿದ್ದು, ರಾಜ್ಯದ ಪರಿಸ್ಥಿತಿ ಕೈಮೀರುತ್ತಿದ್ದು, 10 ಪಟ್ಟು ಐಸಿಯು ವೆಂಟಿಲೇಟರ್ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.