ಬೆಂಗಳೂರು, ಏ.24 (DaijiworldNews/HR): ಕರ್ನಾಟದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ರೋಗಲಕ್ಷಣವಿಲ್ಲದ ಕೊರೊನಾ ಸೋಂಕಿತರನ್ನು ಯಾವುದೇ ಕಾರಣಕ್ಕೂ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳದಂತೆ ವೈದ್ಯರು ಮತ್ತು ಆಸ್ಪತ್ರೆ ಮುಖ್ಯಸ್ಥರಿಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸೂಚನೆ ನೀಡಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರೋಗಲಕ್ಷಣವಿಲ್ಲದವರೂ ಕೂಡ ಆಸ್ಪತ್ರೆಗೆ ದಾಖಲಾಗುತ್ತಿರುವುದು ಕಂಡು ಬಂದಿದ್ದು, ನಾನು ಎಲ್ಲರಲ್ಲೂ ಮನವಿ ಮಾಡುತ್ತಿದ್ದೇನೆ. ನಿಮಗೆ ತುಂಬಾ ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಿ. ಇಲ್ಲದಿದ್ದರೆ ಹೋ ಐಸೋಲೇಷನ್ ಮೂಲಕವೇ ಚಿಕಿತ್ಸೆ ಪಡೆದುಕೊಳ್ಳಿ. ಒಂದು ವೇಳೆ ನೀವು ಅನಗತ್ಯವಾಗಿ ಆಸ್ಪತ್ರೆಗೆ ದಾಖಲಾಗಿದ್ದೇ ಆದರೆ ಅಗತ್ಯವಿರುವವರಿಗೆ ನೀವು ಅನ್ಯಾಯ ಮಾಡಿದಂತಾಗುತ್ತದೆ" ಎಂದರು.
ಇನ್ನು ಅನೇಕ ಕೊರೊನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದು, ಎಲ್ಲರಿಗೂ ಉಸಿರಾಟದ ಸಮಸ್ಯೆಯಾಗುತ್ತದೆ ಎನ್ನುವ ಪರಿಕಲ್ಪನೆ ತಪ್ಪು, ತುಂಬಾ ಅಗತ್ಯವಿದ್ದಾಗ ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು" ಎಂದು ಮನವಿ ಮಾಡಿದ್ದಾರೆ.