ನವದೆಹಲಿ, ಏ.24 (DaijiworldNews/HR): ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಪ್ರಸ್ತುತದ ಪರಿಸ್ಥಿತಿ ಅಸಹನೀಯವಾಗಿದ್ದು, ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು. ಹಾಗಾಗಿ ಪರಿಸ್ಥಿತಿ ಎದುರಿಸಲು ದೇಶ ಸಜ್ಜಾಗಿರಬೇಕು" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, "ಪಿಆರ್ ಹಾಗೂ ಇನ್ನಿತರೆ ಅನಗತ್ಯ ಯೋಜನೆಗಳ ಬದಲಿಗೆ ಕೊರೊನಾ ಲಸಿಕೆ, ಆಯಕ್ಸಿಜನ್ ಹಾಗೂ ಇನ್ನಿತರೆ ಆರೋಗ್ಯ ಸೇವೆಗಳಿಗೆ ಹಣ ಖರ್ಚು ಮಾಡಿ ಎಂದು ಕೇಂದ್ರ ಸರ್ಕಾರಕ್ಕೆ ಶಾಂತಿಯುತವಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಹುದು. ಪರಿಸ್ಥಿತಿ ಎದುರಿಸಲು ದೇಶ ಸಜ್ಜಾಗಿರಬೇಕಿದೆ. ಪ್ರಸ್ತುತದ ಪರಿಸ್ಥಿತಿ ಅಸಹನೀಯವಾಗಿದೆ" ಎಂದರು.
ಇನ್ನು ಶುಕ್ರವಾರ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್, ದೇಶದಲ್ಲಿ ಕೊರೊನಾದಿಂದ ಸಾವನಪ್ಪುತ್ತಿಲ್ಲ ಬದಲಾಗಿ ಮೋದಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸೋಂಕಿತರು ಸಾವನ್ನಪ್ಪುತ್ತಿದ್ದಾರೆ" ಎಂದು ಆರೋಪಿಸಿದ್ದರು.