ಗೋಪೇಶ್ವರ, ಏ.24 (DaijiworldNews/HR): ಭಾರತ ಮತ್ತು ಚೀನಾ ಗಡಿ ಸಮೀಪ ಸಂಭವಿಸಿದ ಹಿಮಪಾತದಲ್ಲಿ ಬಾರ್ಡರ್ ರೋಡ್ ಆರ್ಗನೈಜೇಶನ್ಗೆ ಸೇರಿದ 8 ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಸುಮ್ನಾ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಇಬ್ಬರ ಮೃತದೇಹಗಳನ್ನು ಪತ್ತೆ ಮಾಡಲಾಗಿದ್ದು, ಶನಿವಾರ ಆರು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸ್ವಾತಿ ಭದೌರಿಯಾ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್, "8 ಜನ ಕಾರ್ಮಿಕರು ಮೃತಪಟ್ಟಿದ್ದು, ಘಟನಾ ಸ್ಥಳದಿಂದ ನಾಲ್ವರು ಗಾಯಗೊಂಡವರನ್ನು ರಕ್ಷಿಸಲಾಗಿದೆ" ಎಂದು ಹೇಳಿದ್ದಾರೆ.