ಬೆಂಗಳೂರು, ಏ. 24 (DaijiworldNews/SM): ರಾಜ್ಯದ ಯಾವುದೇ ಭಾಗಗಳಲ್ಲಿ ಆಮ್ಲಜನಕದ ಕೊರತೆಯಾದಲ್ಲಿ ತಕ್ಷಣಕ್ಕೆ ತನ್ನ ಗಮನಕ್ಕೆ ತರಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಖಾಸಗಿ ಆಸ್ಪತ್ರೆಗಳು ಸೇರಿದಂತೆ ಎಲ್ಲಾ ಆಸ್ಪತ್ರೆಗಳಲ್ಲಿ ಆಮ್ಲಜನಕ ಮತ್ತು ಹಾಸಿಗೆಗಳ ದಾಸ್ತಾನು ವಿವರಗಳನ್ನು ಮುಖ್ಯಮಂತ್ರಿಗಳು ಸಂಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಮ್ಲಜನಕ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ನನ್ನ ಗಮನಕ್ಕೆ ತರಬೇಕು ಎಂದಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿದ್ದಾರೆ. ಆಕ್ಸಿಜನ್ ಹಾಗೂ ಬೆಡ್ ಕೊರತೆಯಿದೆಯಾ ಎಂಬ ಬಗ್ಗೆ ಮಾಹಿತಿ ಪಡೆದುಕೊಂಡರು.