ಅಹಮದಾಬಾದ್, ಏ.25 (DaijiworldNews/HR): ದೇಶದಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುಜರಾತ್ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರಿಗೂ ಸೋಂಕು ದೃಢಪಟ್ಟಿದೆ.
ಆರೋಗ್ಯ ಖಾತೆಯನ್ನೂ ಹೊಂದಿರುವ ಪಟೇಲ್ ನಿತಿನ್ ಕೊರೊನಾ ದೃಢಪಟ್ಟ ನಂತರ ಯು.ಎನ್. ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್ಗೆ ದಾಖಲಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿತುವ ಅವರು, "ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ನಂತರ ನಾನು ಆರ್ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡಿದ್ದು, ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಯ ಮೇರೆಗೆ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದೇನೆ" ಎಂದು ತಿಳಿಸಿದ್ದಾರೆ.
ಇನ್ನು ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ನಿತಿನ್ ಪಟೇಲ್ ಅವರು ಮನವಿ ಮಾಡಿದ್ದಾರೆ.