ಲಖನೌ, ಏ.25 (DaijiworldNews/HR): ಇಬ್ಬರು ನವಜಾತ ಅವಳಿ ಶಿಶುಗಳು ಆಕ್ಸಿಜನ್ ಇಲ್ಲದ ಕಾರಣ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉತ್ತರಪ್ರದೇಶದ ಬಾರ್ಬಂಕಿಯಲ್ಲಿರುವ ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಶನಿವಾರ ಹುಟ್ಟಿದ ಆ ಅವಳಿ ಮಕ್ಕಳಿಗೆ ಆಕ್ಸಿಜನ್ ಅವಶ್ಯಕತೆ ಇದೆ ಎಂದು ವೈದ್ಯರು ತಿಳಿಸಿದ್ದು, ಆಸ್ಪತ್ರೆಯಲ್ಲಿ ಶಿಶುಗಳಿಗೆ ನೀಡಲು ಆಮ್ಲಜನಕ ಇರಲಿಲ್ಲ. ಈ ಕಾರಣದಿಂದ ಮಕ್ಕಳು ಮೃತಪಟ್ಟಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನು ಇತ್ತೀಚೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿದ್ದು, ನಮ್ಮಲ್ಲಿ ಆಮ್ಲಜನಕದ ಕೊರತೆಯಿಲ್ಲ. ಕಾಳಸಂತೆಯಲ್ಲಿ ಆಕ್ಸಿಜನ್ ಮಾರುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು, ಆದರೆ ಲಖನೌ ಆಸ್ಪತ್ರೆಯಲ್ಲಿ ನಡೆದಿರುವ ಈ ಘಟನೆಯಿಂದ ಜನರು ಸರ್ಕಾರವನ್ನು ಪ್ರಶ್ನೆ ಮಾಡುವಂತಾಗಿದೆ.