ನವದೆಹಲಿ, ಎ.25 (DaijiworldNews/PY): ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಹಾಗೂ ಆಕ್ಸಿಜನ್ ಕೊರತೆ ಉಂಟಾಗಿರುವ ಬೆನ್ನಲ್ಲೇ ದೆಹಲಿ ಸರ್ಕಾರವು ಮೇ 3ರವರೆಗೂ ಲಾಕ್ಡೌನ್ ವಿಸ್ತರಿಸಿದೆ.
"ರಾಷ್ಟ್ರ ರಾಜಧಾನಿಯಲ್ಲಿ ಆರು ದಿನಗಳ ಕಾಲ ಲಾಕ್ಡೌನ್ ಜಾರಿ ಮಾಡಲಾಗುತ್ತಿದ್ದು, ಮೇ 3ರ ಸೋಮವಾರದಿಂದ ಬೆಳಗ್ಗೆ 5 ಗಂಟೆಯವರೆಗೂ ಲಾಕ್ಡೌನ್ ಅನ್ನು ವಿಸ್ತರಣೆ ಮಾಡಲಾಗಿದೆ" ಎಂದು ಸಿಎಂ ಅರವಿಂದ್ ಕೇಜ್ರೀವಾಲ್ ತಿಳಿಸಿದ್ದಾರೆ.
"ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆ ಲಾಕ್ಡೌನ್ನ ಅಗತ್ಯ ಇದೆ" ಎಂದು ಹೇಳಿದ್ದಾರೆ.
ಶನಿವಾರ ದೆಹಲಿಯಲ್ಲಿ 24,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗಿದ್ದು, 357 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.