ಮಹಾರಾಷ್ಟ್ರ , ಏ.25 (DaijiworldNews/HR): ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಕೊರೊನಾ ಕೇರ್ ಸೆಂಟರ್ನಿಂದ ಸೋಂಕಿತರು ತಪ್ಪಿಸಿಕೊಂಡ ಆತಂಕಕಾರಿ ಘಟನೆ ನಡೆದಿದೆ.
ಘಟಾಂಜಿ ತಾಲೂಕಿನ ವಿದ್ಯಾರ್ಥಿಗಳ ಹಾಸ್ಟೆಲ್ನನ್ನು ಕೊರೊನಾ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಅಲ್ಲಿ ಆರೈಕೆಯಲ್ಲಿದ್ದ ಸೋಂಕಿತರು ತಪ್ಪಿಸಿಕೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿ ಡಾ. ಸಂಜಯ್ ಪುರಮ್ ತಿಳಿಸಿದ್ದಾರೆ.
ಇನ್ನು ಘಟನೆಗೆ ಸಂಬಂಧಿಸಿದಂತೆ ಘಟಾಂಜಿ ತಾಲೂಕು ಪೊಲೀಸ್ ಠಾಣೆಯಲ್ಲಿ ಸುಮಾರು 20 ಮಂದಿ ಸೋಂಕಿತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶುಕ್ರವಾರ ಕೊರೊನಾ ಪರೀಕ್ಷಾ ಶಿಬಿರವನ್ನು ಆಯೋಜಿಸಲಾಗಿದ್ದು, ಪರೀಕ್ಷೆಯಲ್ಲಿಪಾಸಿಟಿವ್ ವರದಿ ಬಂದ 19 ಮಂದಿಯನ್ನು ಘಟಾಂಜಿಯ ಕೊರೊನಾ ಕೇರ್ ಸೆಂಟರ್ಗೆ ದಾಖಲಿಸಲಾಗಿತ್ತು.
ಇನ್ನು ಈ ಎಲ್ಲಾ 19 ರೋಗಿಗಳು ಮತ್ತು ಇನ್ನೊಬ್ಬ ವ್ಯಕ್ತಿ ಶನಿವಾರ ಪರಾರಿಯಾಗಿದ್ದಾರೆ ಎಂದು ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸದ್ಯಕ್ಕೆ ಅವರನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.