ಹಾವೇರಿ, ಎ.25 (DaijiworldNews/PY): ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ತಾಲೂಕಿನ ನಾಗನೂರು ಬಳಿ ನಡೆದಿದೆ.
ಸಾಂದರ್ಭಿಕ ಚಿತ್ರ
ಆತ್ಮಹತ್ಯೆ ಮಾಡಿಕೊಂಡವರನ್ನು ಇರ್ಷಾದ್ ಕುಡಚಿ (23) ಹಾಗೂ ವಿದ್ಯಾಶ್ರೀ ಗಾಳಿ (22) ಎಂದು ಗುರುತಿಸಲಾಗಿದೆ.
ಕೆಲ ದಿನಗಳ ಹಿಂದೆ ವಿದ್ಯಾಶ್ರೀ ಅವರಿಗೆ ಬೇರೊಬ್ಬ ಯುವಕನ ಜೊತೆ ನಿಶ್ಚಿತಾರ್ಥವಾಗಿತ್ತು. ಶನಿವಾರ ಬೆಳಗ್ಗೆ ವಿದ್ಯಾಶ್ರೀ ಅವರು ನಾಪತ್ತೆಯಾಗಿದ್ದಾರೆ ಎಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇಬ್ಬರೂ ಕೂಡಾ ಇರ್ಷಾದ್ ಕುಟುಂಬಕ್ಕೆ ಸೇರಿದ ಜಮೀನಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.