ನವದೆಹಲಿ, ಏ.25 (DaijiworldNews/HR): ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದಾರೆಂದು ಇಂದು ತಿಳಿದು ಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, "ಅತ್ಯಂತ ದುಃಖಕರ ಹಾಗೂ ಆಘಾತದ ವಿಚಾರವಾಗಿದ್ದು, ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಕಾಜಲ್ ಸಿನ್ಹಾ ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸಿನ್ಹಾ ಅವರು ತಮ್ಮ ಜೀವನವನ್ನು ಜನರ ಸೇವೆಗೆ ಅರ್ಪಿಸಿದ್ದರು. ಇನ್ನು ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಸದಸ್ಯರಾಗಿದ್ದರು. ಅವಕ ಕುಟುಂಬ ಹಾಗೂ ಅಭಿಮಾನಗಳಿಗೆ ಸಂತಾಪ ಸೂಚಿಸುತ್ತೇನೆ" ಎಂದು ಹೇಳಿದ್ದಾರೆ.