ರಾಜ್ ಕೋಟ್ , ಏ.25 (DaijiworldNews/HR): ನೈಟ್ ಕರ್ಫ್ಯೂ ಇದ್ದರು ಕೂಡ ಸಾರ್ವಜನಿಕ ಪ್ರದೇಶದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿ, ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಗುಜರಾತಿನ ರಾಜ್ ಕೋಟ್ನಲ್ಲಿ 14 ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಸಾಂಧರ್ಭಿಕ ಚಿತ್ರ
ಪೊಲೀಸ್ ಅಧಿಕಾರಿಯ ಮಗನೇ ಈ ಬರ್ತ್ ಡೇ ಪಾರ್ಟಿಯನ್ನು ಪೊಲೀಸ್ ಕ್ವಾರ್ಟಸ್ ನಲ್ಲಿ ಆಯೋಜನೆ ಮಾಡಿದ್ದು, ಈ ವೇಳೆ ಪಟಾಕಿಯನ್ನೂ ಸಿಡಿಸಲಾಗಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನುಮತ್ತೊಂದು ಘಟನೆ ಕೂಡ ರಾಜ್ ಕೋಟ್ ನಲ್ಲಿ ನಡೆದಿದ್ದು, ಎನ್ಜಿಓದಲ್ಲಿ ಕೆಲಸ ಮಾಡುವ ಸದಸ್ಯರು ಶಾಲಾ ಆವರಣದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಈ ಸಂಭ್ರಮದ ಕೆಲವು ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕೂಡ ಶೇರ್ ಮಾಡಲಾಗಿದ್ದು, ಇದೇ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಎರಡೂ ಘಟನೆಯಿಂದ ಒಟ್ಟು 14 ಮಂದಿಯನ್ನು ಬಂಧನ ಮಾಡಿದ್ದಾರೆ.