ನವದೆಹಲಿ, ಏ.25 (DaijiworldNews/HR): ದೇಶದಲ್ಲಿ 551 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪಿಎಂ ಕೇರ್ಸ್ ಫಂಡ್ನ ಹಣಕಾಸು ನೆರವಿನಲ್ಲಿ ಸ್ಥಾಪಿಸಲಾಗುವುದು ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ತಿಳಿಸಿದೆ.
ಸಾಂಧರ್ಭಿಕ ಚಿತ್ರ
ದೇಶದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ರೋಗಿಗಳಿಗೆ ಚಿಕಿತ್ಸೆಗಾಗಿ ಅಡೆತಡೆ ಇಲ್ಲದೇ ಪ್ರಾಣವಾಯು ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಪ್ರಧಾನಿ ಮೋದಿ ಅವರ ನಿರ್ದೇಶನದಂತೆ, ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಹಣಕಾಸು ಒದಗಿಸಲು ಪಿಎಂ ಕೇರ್ಸ್ ಫಂಡ್ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿದೆ.
ಈ ಘಟಕಗಳನ್ನು ವಿವಿಧ ರಾಜ್ಯಗಳ ಆಯ್ದ ಜಿಲ್ಲಾ ಆಸ್ಪತ್ರೆಗಳಲ್ಲಿ ಸ್ಥಾಪಿಸಲಿದ್ದು, ಇಲ್ಲಿ ಉತ್ಪಾದನೆಯಾಗುವ ಆಮ್ಲಜನಕವನ್ನು ಆರೋಗ್ಯ ಸಚಿವಾಲಯ ಖರೀದಿಸುವುದು ಎಂದು ಪಿಎಂಒ ಪ್ರಕಟಣೆ ತಿಳಿಸಿದೆ.