ನವದೆಹಲಿ, ಎ.25 (DaijiworldNews/PY): "ಜಾಗತಿಕವಾಗಿ ಭಾರತ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಗರಿಷ್ಠ ವೇಗದಲ್ಲಿ ಲಸಿಕೆ ನೀಡಿದೆ" ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ರವಿವಾರ ಹೇಳಿಕೆ ಬಿಡುಗಡೆ ಮಾಡಿರುವ ಆರೋಗ್ಯ ಸಚಿವಾಲಯ, "ದೇಶದಲ್ಲಿ ಒಟ್ಟು ಸುಮಾರು 14,09,16,417 ಡೋಸ್ ಲಸಿಕೆಯನ್ನು ನೀಡಲಾಗಿದೆ. ಅಲ್ಲಿದೇ, ಲಸಿಕೆ ಕಾರ್ಯಕ್ರಮದ ಉತ್ತೇಜನಕ್ಕಾಗಿ ವಿವಿಧ ಕ್ರಮ ಕೈಗೊಳ್ಳಲಾಗಿದೆ" ಎಂದಿದೆ.
"ಇದರಲ್ಲಿ ಸುಮಾರು 92,90,528 ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳು, ಅಧಿಕಾರಿಗಳು ಸೇರಿದಂತೆ 1,19,50,251 ಮುಂಚೂಣಿ ಕಾರ್ಯಕರ್ತರಿಗೆ ಆದ್ಯತೆಯಲ್ಲಿ ಕೊರೊನಾ ಲಸಿಕೆ ನೀಡಲಾಗಿದೆ. ಈಗಾಗಲೇ ಎರಡನೇ ಡೋಸ್ ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಂಡಿದ್ದಾರೆ" ಎಂದು ಹೇಳಿದೆ.
"ಕರ್ನಾಟಕ ಸೇರಿದಂತೆ ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಗುಜರಾತ್, ಕೇರಳ, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶದಲ್ಲಿ ಶೇ. 58.83ರಷ್ಟು ಲಸಿಕೆ ನೀಡಲಾಗಿದೆ" ಎಂದು ತಿಳಿಸಿದೆ.
"ಕಳೆದ 66 ದಿನಗಳಲ್ಲಿ ಭಾರತ ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಹಾಗೂ ಗರಿಷ್ಠ ವೇಗದಲ್ಲಿ ಸುಮಾರು 14 ಕೋಟಿ ಲಸಿಕೆ ವಿತರಿಸಿದೆ" ಎಂದಿದೆ.
ಜನವರಿ 16ರಂದು ಆರೋಗ್ಯ ಕ್ಷೇತ್ರದವರಿಗೆ, ಫೆಬ್ರವರಿ 2ರಂದು ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕಾ ಯೋಜನೆ ಪ್ರಾರಂಭ ಮಾಡಲಾಗಿತ್ತು. ಸದ್ಯ, 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿದೆ.