ಬೆಂಗಳೂರು, ಏ. 25 (DaijiworldNews/SM): ರಾಜ್ಯಕ್ಕೆ ಔಷಧಿ, ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ಬೇಡುತ್ತಿರುವುದು ನೋಡಿದಾಗ, ಕನಿಕರ ಮೂಡುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ 25 ಬಿಜೆಪಿಯ ಸಂಸದರಿದ್ದಾರೆ. ಆ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಎನ್ನುವುದನ್ನು ಪತ್ತೆ ಹಚ್ಚಬೇಕು. ಹಾಗೂ ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.